ಥ್ರೋಬಾಲ್ ಕ್ರೀಡೆಯಲ್ಲಿ ವಿಭಾಗಮಟ್ಟಕ್ಕೆ ಆಯ್ಕೆಯಾದ ಸರ್ವದೈವತ ವಿದ್ಯಾಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ತಂಡಗಳು
admincoorgdaily

ಮಡಿಕೇರಿ;ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಥ್ರೋಬಾಲ್ ಪಂದ್ಯಾಟ ಮಡಿಕೇರಿ ತಾಲೂಕಿನ ಕಡಗದಾಳುವಿನಲ್ಲಿ ನಡೆದಿದ್ದು, ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಿದ್ದ ಸರ್ವದೈವತ ಪ್ರಾಥಮಿಕ ಶಾಲೆಯ ಬಾಲಕ - ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿರುತ್ತಾರೆ.
ಹಾಗೆಯೇ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡು ನಮ್ಮ ಸಂಸ್ಥೆಯ ಮೂರೂ ತಂಡಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸ ಮೈಲುಗಲ್ಲನ್ನು ಸೃಷ್ಟಿಸಿದ್ದಾರೆ . ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್ ಗೌಡ ಹಾಗೂ ಯೋಗೇಶ್ ತರಬೇತಿಯನ್ನು ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಸೇರಿದಂತೆ ಎಲ್ಲಾ ಬೋಧಕ ಭೋದಕೇತರ ವರ್ಗ ಸಂತೋಷ ವ್ಯಕ್ತಪಡಿಸಿದ್ದಾರೆ.