Kodagu

ಮಡಿಕೇರಿ ಮಹಿಳಾ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಪ್ರೊ. ದಯಾನಂದ ಕೆ.ಸಿ ಅಧಿಕಾರ ಸ್ವೀಕಾರ

admincoorgdaily

ಮಡಿಕೇರಿ ಮಹಿಳಾ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಪ್ರೊ. ದಯಾನಂದ ಕೆ.ಸಿ ಅಧಿಕಾರ ಸ್ವೀಕಾರ
ಮಡಿಕೇರಿ:ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಪ್ರೊಫೆಸರ್ ದಯಾನಂದ ಕೆ.ಸಿ ಅವರು ನ.23ರಂದು ಅಧಿಕಾರ ಸ್ವೀಕರಿಸಿದರು.

ಭಾಗಮಂಡಲ ನಾಡಿನ ತಾವೂರು ಗ್ರಾಮದ ಕೂಡಕಂಡಿ ಚಂದ್ರಹಾಸ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರರಾದ ದಯಾನಂದ ಕೆ.ಸಿ ಅವರು, ಪ್ರಸ್ತುತ ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಗ್ರೇಡ್-1 ಪ್ರಾಂಶುಪಾಲರ ಹುದ್ದೆಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅವರು, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮಡಿಕೇರಿಗೆ ಗ್ರೇಡ್-1 ಪ್ರಾಂಶುಪಾಲರಾಗಿ ಸ್ಥಳ ನಿಯುಕ್ತಿಗೊಂಡು ಅಧಿಕಾರ ಸ್ವೀಕರಿಸಿದರು.
ಇವರು ಪ್ರಸ್ತುತ ಮಡಿಕೇರಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವರು.