ಜುಲೈ 18 ರಂದು ಕೊಡಗು ಜಿಲ್ಲಾ ಲಾರಿ ಮತ್ತು ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ

ಮಡಿಕೇರಿ:ಜಿಲ್ಲಾಧಿಕಾರಿಗಳ ಆದೇಶ ಕೊಡಗು ಜಿಲ್ಲೆಯ ಲಾರಿ ಮಾಲೀಕರು, ಚಾಲಕರು ಮಾತ್ರ ಪಾಲಿಸುತ್ತಿದ್ದಾರೆ. ಆದರೆ, ಜಿಲ್ಲೆಯಲ್ಲಿ ಹೊರ ಜಿಲ್ಲೆಯಿಂದ 18,500 ಕೆ.ಜಿ. ಗಿಂತ ಹೆಚ್ಚಿನ ತೂಕವಿರುವ ಸರಕು ಸಾಗಾಣಿ ಮಾಡುವ ವಾಹನಗಳು ಎಗ್ಗಿಲ್ಲದೇ ಸಂಚಾರ ಮಾಡುತ್ತಿದೆ. ಇದಕ್ಕೆ ಕಾನೂನಿನಡಿ ಯಾವುದೇ ಕ್ರಮ ಆಗುತ್ತಿಲ್ಲ. ಈ ಹಿನ್ನೆಲೆ ಕೊಡಗು ಜಿಲ್ಲಾ ಲಾರಿ ಮತ್ತು ಮಾಲೀಕರ ಸಂಘದಿಂದ ಜುಲೈ 18ರಂದು ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಜಿಲ್ಲೆಯ ಲಾರಿ ಚಾಲಕರು, ಮಾಲೀಕರು, ಲೋಡರ್ಸ್‌ಗಳು, ಕ್ರೈನ್ ಆಪರೇಟರ್‌ಗಳು ಅಂದಿನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲಾ ಲಾರಿ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಕರೆ ನೀಡಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸರಕು ಸಾಗಾಣಿಕೆ ಮಾಡುವ 18,500ಕೆ.ಜಿ. ಗಿಂತ ಹೆಚ್ಚಿನ ತೂಕವಾಹನಗಳಿಗೆ ಜಿಲ್ಲಾಡಳಿತ ಏರಿರುವ ನಿರ್ಬಂಧವನ್ನು ಸಡಿಲಗೊಳಿಸಬೇಕು. ಕೊಡಗು ಜಿಲ್ಲಾ ಲಾರಿ ಮಾಲೀಕರ ಮತ್ತು ಜಿಲ್ಲಾಧಿಕಾರಿಗಳ ಆದೇಶ ಕೊಡಗು ಜಿಲ್ಲೆಯ ಲಾರಿ ಮಾಲೀಕರು, ಚಾಲಕರು ಮಾತ್ರ ಪಾಲಿಸುತ್ತಿದ್ದಾರೆ. ಆದರೆ, ಜಿಲ್ಲೆಯಲ್ಲಿ ಹೊರ ಜಿಲ್ಲೆಯಿಂದ 18,500 ಕೆ.ಜಿ. ಗಿಂತ ಹೆಚ್ಚಿನ ತೂಕವಿರುವ ಸರಕು ಸಾಗಾಣಿಕೆ ಮಾಡುವ ವಾಹನಗಳು ಎಗ್ಗಿಲ್ಲದೇ ಸಂಚಾರ ಮಾಡುತ್ತಿದೆ. ಇದಕ್ಕೆ ಕಾನೂನಿನಡಿ ಯಾವುದೇ ಕ್ರಮ ಆಗುತ್ತಿಲ್ಲ. ಈ ಹಿನ್ನೆಲೆ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ. ಇಂದು ಜಿಲ್ಲೆಯ ವಾಹನಗಳು ಮಾತ್ರ ಜಿಲ್ಲಾಧಿಕಾರಿಗಳ ಆದೇಶಕ್ಕೆ ಬದ್ಧವಾಗಿ ನಿಲುಗಡೆಗೊಳಿಸಲಾಗಿದೆ. ಆದರೆ, ನಮಗೆ ಒಂದು ಕಾನೂನು ಅವರಿಗೆ ಕಾನೂನು ಸರಿಯಲ್ಲ. ಸರ್ಕಾರಕ್ಕೆ ನಾವು ಕೂಡ ತೆರಿಗೆ ಕಟ್ಟುತ್ತಿದ್ದೇವೆ. ನಮಗೂ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಅಶ್ರಫ್, ಸಂಘದ ಕಾರ್ಯದರ್ಶಿ ಅಝೀಜ್, ಖಜಾಂಚಿ ಹುರೇಶ್, ಕೋಶಾಧಿಕಾರಿ ಶ್ಯಾಮ್ ಉಪಸ್ಥಿತರಿದ್ದರು.