Kodagu

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಸಿದ್ದಾಪುರದಲ್ಲಿ ಪ್ರತಿಭಟನೆ

admincoorgdaily

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಸಿದ್ದಾಪುರದಲ್ಲಿ ಪ್ರತಿಭಟನೆ
ಸಿದ್ದಾಪುರ: ಎಸ್.ಐ.ಆರ್ ವಿರೋಧಿಸಿ ಹಾಗೂ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಯಿತು.

ಸಮಾನ ಮನಸ್ಕರ ವೇದಿಕೆಯಿಂದ
ಇಲ್ಲಿಯ ಬಸ್ ನಿಲ್ದಾಣದದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಮಿಕ ಮುಖಂಡ ಪಿ.ಆರ್ ಭರತ್ ಮಾತನಾಡಿ, ಎಸ್.ಐ.ಆರ್ ಮೂಲಕ ದೇಶದ 13 ಕೋಟಿಗೂ ಅಧಿಕ ಮತದಾರರನ್ನು ಹಕ್ಕನ್ನು ಕಸಿದುಕೊಂಡು, ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಹೊರಟಿರುವ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಜಿ.ಪಂ ಮಾಜಿ ಸದಸ್ಯ ಎಂ.ಎಸ್ ವೆಂಕಟೇಶ್ ಮಾತನಾಡಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಹಾಗೂ ವಿದ್ಯಾರ್ಥಿಗಳನ್ನು ಅಕ್ರಮ ಬಂಧನದಲ್ಲಿಟ್ಟು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಸೃಷ್ಟಿ ಮಾಡಿರುವುದು ಅತ್ಯಂತ ಖಂಡನೀಯ ಎಂದ ಅವರು, ಅಕ್ರಮ ಬಂಧನದ ಮೂಲಕ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು. 

ಕಾರ್ಮಿಕ ಮುಖಂಡ ಎನ್.ಡಿ ಕುಟ್ಟಪ್ಪ ಮಾತನಾಡಿದರು. ಪ್ರತಿಭಟನೆಯಲ್ಲಿ ಸಮಾನ ಮನಸ್ಕರ ವೇದಿಕೆಯ ಸಂಚಾಲಕ ಬಶೀರ್ ಅಹಮದ್ ಟಿ.ಎ, ಪ್ರಮುಖರಾದ ಎಂ. ಬಿಜೋಯ್, ಮುಸ್ತಫ, ಎಸ್.ಬಿ ಪ್ರತೀಶ, ಸಾದಿಕ್, ಎಂ.ಕೆ ಮಣಿ, ಚಂದ್ರನ್, ಶೌಕತ್ ಅಲಿ, ಅಸ್ಕರ್, ಮಂಜುನಾಥ್, ಶೆಮೀರ್, ದೇವಯಾನಿ, ವಿ.ಕೆ ಬಶೀರ್, ಕೆ.ಸಿ ಬಶೀರ್, ಯಮುನಾ, ಅಫ್ಸಲ್, ಸೆಫಿಯಾ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.