ಮಡಿಕೇರಿ ಟೋಲ್ ಗೇಟ್ನಲ್ಲಿ ಪ್ರತಿಭಟನೆಗೆ ನಿರ್ಬಂಧ; ಜನರಲ್ ತಿಮ್ಮಯ್ಯ ವೃತ್ತದಲ್ಲಿ ಧರಣಿ, ಉಪವಾಸ ಸತ್ಯಾಗ್ರಹ, ಮಾನವ ಸರಪಳಿಗೆ ಬ್ರೇಕ್
admincoorgdaily

ಮಡಿಕೇರಿ: ಮಡಿಕೇರಿ ಟೋಲ್ ಗೇಟ್ ಬಳಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುವುದಕ್ಕೆ ನಿರ್ಬಂಧ ವಿಧಿಸಿ ಕೊಡಗು ಜಿಲ್ಲಾಧಿಕಾರಿ ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಇಲಾಖೆಯ ಕೋರಿಕೆಯ ಮೇರೆಗೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ಪ್ರವೇಶ ಮತ್ತು ನಿರ್ಗಮನದ ಪ್ರಮುಖ ಮಾರ್ಗವಾಗಿರುವ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದಾಗ ಜನ ಮತ್ತು ವಾಹನಗಳ ನಿಯಂತ್ರಣ ಮಾಡುವುದು ಕಷ್ಟಸಾಧ್ಯವಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ.
ಈ ಆದೇಶದ ಪ್ರಕಾರ, ಮುಂದಿನ ಆದೇಶದವರೆಗೆ ಜಿ.ಟಿ. ವೃತ್ತದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಸತ್ಯಾಗ್ರಹ ಹಾಗೂ ಮಾನವ ಸರಪಳಿ ನಡೆಸುವುದನ್ನು ನಿರ್ಬಂಧಿಸಲಾಗಿದೆ.