ಅ.03 ರಂದು ಬಿಟ್ಟಂಗಾಲ ಮತ್ತು ಕೊಡಗರಹಳ್ಳಿಯಲ್ಲಿ ಪ್ರಜಾಸೇವಾ ಅಭಿಯಾನ
admincoorgdaily

ಮಡಿಕೇರಿ:-ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಅಭಿಯಾನ ಜನಸಂಪರ್ಕ ಸಭೆಯು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್, 03 ರಂದು ಬೆಳಗ್ಗೆ 11.30 ಗಂಟೆಗೆ ಬಿಟ್ಟಂಗಾಲದ ಕೂರ್ಗ್ ಯತ್ನಿಕ್ ಹಾಲ್(ಓಲ್ಡ್ ಆರ್‍ಕೆಎಫ್) ಇಲ್ಲಿ ನಡೆಯಲಿದೆ.
ಹಾಗೆಯೇ ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನ ಜನಸಂಪರ್ಕ ಸಭೆಯು ಶಾಸಕರಾದ ಡಾ.ಮಂತರ್‍ಗೌಡ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್, 03 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿಯ ನೇತಾಜಿ ಸಮುದಾಯ ಭವನದಲ್ಲಿ ನಡೆಯಲಿದೆ. ಸಾರ್ವಜನಿಕರು ಪ್ರಜಾಸೇವಾ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ.