Kodagu

ಸೆ.05 ರಂದು ಪ್ರಜಾಸೇವಾ ಆಂದೋಲನಾ ಸಭೆ

admincoorgdaily

ಸೆ.05 ರಂದು ಪ್ರಜಾಸೇವಾ ಆಂದೋಲನಾ ಸಭೆ
ಮಡಿಕೇರಿ :-ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನಾ ಸಭೆಯು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್, 05 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.  

ಸಾರ್ವಜನಿಕರು ಪ್ರಜಾಸೇವಾ ಅಭಿಯಾನದ ಪ್ರಯೋಜನವನ್ನು ಪಡೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ತಿಳಿಸಿದ್ದಾರೆ. 
ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡುವುದು ಸರ್ಕಾರದ ಆದ್ಯತೆ ಆಗಿದೆ. ಅದರಂತೆ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ.