ಕೊಡಗು ಜಿಲ್ಲೆಯ ಮಳೆ ವಿವರ: ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 14.04 ಮಿ.ಮೀ. ಮಳೆ

ಮಡಿಕೇರಿ:-ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 14.04 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 49.31 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1693.03 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1129.72 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.82 ಮಿ.ಮೀ. ಕಳೆದ ವರ್ಷ ಇದೇ ದಿನ 56.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2468.27 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1650.96 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 39.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1586.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1173 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.12 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 53.82 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1633.71 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1099.67 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 75.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1892.12 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 959.16 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 21.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 884.34 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 765.80 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 23, ನಾಪೋಕ್ಲು 15.40, ಸಂಪಾಜೆ 43.50, ಭಾಗಮಂಡಲ 33.40, ವಿರಾಜಪೇಟೆ 6.60, ಅಮ್ಮತ್ತಿ 10, ಹುದಿಕೇರಿ 14, ಶ್ರೀಮಂಗಲ 13.40, ಪೊನ್ನಂಪೇಟೆ 5, ಬಾಳೆಲೆ 4.08, ಸೋಮವಾರಪೇಟೆ 11.60, ಶನಿವಾರಸಂತೆ 7, ಶಾಂತಳ್ಳಿ 16, ಕೊಡ್ಲಿಪೇಟೆ 8.80, ಕುಶಾಲನಗರ 3.20, ಸುಂಟಿಕೊಪ್ಪ 23 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (14-07-2025) ವರದಿ
********************************************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.03 ಅಡಿಗಳು. ಕಳೆದ ವರ್ಷ ಇದೇ ದಿನ 2854.08 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 6.80 ಮಿ.ಮೀ., ಕಳೆದ ವರ್ಷ ಇದೇ ದಿನ 29.60 ಮಿ.ಮೀ., ಇಂದಿನ ನೀರಿನ ಒಳಹರಿವು 3812 ಕ್ಯುಸೆಕ್, ಕಳೆದ ವರ್ಷ ಇದೇ ದಿನ 4691 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 3000 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.