ಕೊಡಗಿನ ಎ.ಬಿ.ಸುಬ್ಬಯ್ಯ, ಪ್ರಸಾದ್ ಬಿದ್ದಪ್ಪಗೆ ರಾಜ್ಯೋತ್ಸವ ಪ್ರಶಸ್ತಿ
admincoorgdaily

ಮಡಿಕೇರಿ:ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗಿನ ಇಬ್ಬರು ಹೆಸರಾಂತ ಸಾಧಕರು ಆಯ್ಕೆಯಾಗಿದ್ದಾರೆ.
ಹೆಸರಾಂತ ಹಾಕಿ ಕ್ರೀಡಾ ತಾರೆ ಡಾ. ಎ.ಬಿ. ಸುಬ್ಬಯ್ಯ ಅವರು ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಹಾಗೂ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರು ಸಂಕೀರ್ಣ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ದಿನಾಚರಣೆಯಂದು ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.