ದುಬಾರೆ ಆನೆ ಶಿಬಿರದಲ್ಲಿ ಕಾವಾಡಿಗಳ ನೇಮಕಾತಿ ಪ್ರಕ್ರಿಯೆ ಚುರುಕು;ನಾಳೆಯಿಂದ ಪ್ರವಾಸಿಗರಿಗೆ ಪ್ರವೇಶ ಮುಕ್ತ
admincoorgdaily

ಸಿದ್ದಾಪುರ:-ದುಬಾರೆ ಸಾಕಾನೆ ಶಿಬಿರದಲ್ಲಿ ಖಾಲಿ ಇರುವ ಆನೆ ಕಾವಾಡಿಗಳ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ.
ನೇಮಕಾತಿ ಪ್ರಕ್ರಿಯೆ ಇನ್ನೂ ಸಂಪೂರ್ಣವಾಗಿ ಅಂತಿಮಗೊಂಡಿಲ್ಲ ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯ ಪರೀಕ್ಷೆ, ಆನೆಗಳನ್ನು ನಿಯಂತ್ರಿಸುವ ಹಾಗೂ ಆನೆ ಏರುವ ಸಾಮರ್ಥ್ಯ, ಸಂದರ್ಶನ ಮತ್ತು ಅವರ ಹಿಂದಿನ ಅನುಭವಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಲ್ಲ ಹಂತಗಳು ಪೂರ್ಣಗೊಂಡ ಬಳಿಕ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನಾಳೆಯಿಂದ ಸಾರ್ವಜನಿಕರಿಗೆ ಪ್ರವೇಶ:-
ಮಂಗಳವಾರ ವಾರದ ರಜೆ ಹಾಗೂ ಕಾವಾಡಿಗಳ ನೇಮಕಾತಿ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಬುಧವಾರ ದುಬಾರೆ ಸಾಕಾನೆ ಶಿಬಿರಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು
ಆದರೆ ನೇಮಕಾತಿ ಪ್ರಕ್ರಿಯೆ ಮುಂದುವರಿದಿರುವ ನಡುವೆಯೇ, ಗುರುವಾರದಿಂದ (ಸೆ.24) ದುಬಾರೆ ಸಾಕಾನೆ ಶಿಬಿರವು ಸಾರ್ವಜನಿಕರು ಹಾಗೂ ಪ್ರವಾಸಿಗರ ವೀಕ್ಷಣೆಗೆ ಯಥಾರೀತಿ ಮುಕ್ತವಾಗಿರಲಿದೆ ಎಂದು ಮಡಿಕೇರಿ ಡಿಸಿಎಫ್ ಅಭಿಷೇಕ್ ತಿಳಿಸಿದ್ದಾರೆ.