ಶ್ರೀಮಂಗಲ;ರಾಮೇಶ್ವರ ಬಳಿ ರೀಲ್ಸ್ ಹುಚ್ಚಾಟ - 3 ವಾಹನಗಳಿಗೆ 7500 ದಂಡ!
admincoorgdaily

ಶ್ರೀಮಂಗಲ: ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ರಾಮೇಶ್ವರ ದೇವಸ್ಥಾನದ ಸಮೀಪ ಪ್ರವಾಸಿಗರು ನಿಯಮ ಮೀರಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯದ ವಾಹನ ಚಾಲನೆ ಮಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಶ್ರೀಮಂಗಲ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಮೂರು ವಾಹನಗಳನ್ನು ಪತ್ತೆ ಹಚ್ಚಿ ಮಡಿಕೇರಿ ಟ್ರಾಫಿಕ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ ಒಟ್ಟು ರೂ. 7,500 ದಂಡ ವಿಧಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.