Kodagu

ರೋಟರಿ ಸಂಸ್ಥೆಯಿಂದ ಅ.25ರಂದು ಕೊಡ್ಲಿಪೇಟೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

admincoorgdaily

ರೋಟರಿ ಸಂಸ್ಥೆಯಿಂದ ಅ.25ರಂದು ಕೊಡ್ಲಿಪೇಟೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ
ಕೊಡ್ಲಿಪೇಟೆ:‌ರೋಟರಿ ಹೇಮಾವತಿ ಸಂಸ್ಥೆಯ ವತಿಯಿಂದ ಅ.25ರ ಭಾನುವಾರ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಶಿಬಿರವು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೊಡ್ಲಿಪೇಟೆ ಸಮೀಪದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಹಾಸನದ ಪುಣ್ಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಪುಣ್ಯ ಕಣ್ಣಿನ ಆಸ್ಪತ್ರೆ ಹಾಗೂ ಜೀವ ಸಂಜೀವಿನಿ ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶಿಬಿರದ ವಿಶೇಷತೆಗಳು:

ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಕಿವಿ-ಮೂಗು-ಗಂಟಲು ಸಮಸ್ಯೆಗಳು, ನರರೋಗ, ಮೂಳೆ ಮತ್ತು ಕೀಲು ನೋವು, ಚರ್ಮರೋಗ ಹಾಗೂ ಮಹಿಳೆಯರ ಆರೋಗ್ಯ ಸಮಸ್ಯೆಗಳು ಸೇರಿದಂತೆ ವಿವಿಧ ಕಾಯಿಲೆಗಳಿಗೆ ತಪಾಸಣೆ ನಡೆಸಲಾಗುವುದು. ಕಣ್ಣಿಗೆ ಸಂಬಂಧಿಸಿದಂತೆ ಸಂಪೂರ್ಣ ತಪಾಸಣೆ ಮಾಡಲಾಗುವುದು ಹಾಗೂ ಅವಶ್ಯಕತೆ ಇರುವವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗುವುದು.

ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಯಿಂದ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, ನಿಯಮಿತ ಆರೋಗ್ಯ ತಪಾಸಣೆ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ಆರೋಗ್ಯ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9449254479, 7483041281, 8762345962, 9448156563 ಸಂಖ್ಯೆಗಳನ್ನು ಸಂಪರ್ಕಿಸಬಹುದು.