ಅ.20 ಮತ್ತು 21ರಂದು ಕೊಡಗು ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ
admincoorgdaily
ಮಡಿಕೇರಿ:-ಕೊಡಗು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಅಕ್ಟೋಬರ್, 20 ರಂದು ಬೆಳಗ್ಗೆ 06 ರಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಸುಂಟಿಕೊಪ್ಪ, 7ನೇ ಹೊಸಕೋಟೆ, ಕಂಬಿಬಾಣಿ ಮತ್ತು ಕೊಡಗರಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯವರೆಗೆ, ಅಕ್ಟೋಬರ್, 21 ರಂದು ಬೆಳಗ್ಗೆ 06 ರಿಂದ ಅಕ್ಟೋಬರ್, 22 ರ ಸಂಜೆ 6 ಗಂಟೆ ವರೆಗೆ ಮಡಿಕೇರಿ ನಗರ ಠಾಣಾ ಸರಹದ್ದಿನ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಸುಂಟಿಕೊಪ್ಪ, ಕುಶಾಲನಗರ ಹಾಗೂ ಬೆಟ್ಟಗೇರಿ, ಮುರ್ನಾಡು ನಗರ ವ್ಯಾಪ್ತಿಯ ವರೆಗೆ ಹಾಗೂ ಅಕ್ಟೋಬರ್, 21 ರಂದು ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್, 22 ರ ಬೆಳಗ್ಗೆ 10 ಗಂಟೆಯವರೆಗೆ ಗೋಣಿಕೊಪ್ಪ ನಗರ ಹಾಗೂ ಅದರ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಪನ್ನಂಪೇಟೆ ತಾಲ್ಲೂಕಿನಾದ್ಯಂತ ಮತ್ತು ವಿರಾಜಪೇಟೆ ಗ್ರಾಮಾಂತರ ಠಾಣಾ ಸರಹದ್ದಿನ ಅಮ್ಮತ್ತಿ, ಬಿಟ್ಟಂಗಾಲ, ಸಿದ್ಧಾಪುರ ರಾಣಾ ವ್ಯಾಪ್ತಿ, ಪಾಲಿಬೆಟ್ಟ ವ್ಯಾಪ್ತಿಯ ವರೆಗೆ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್, ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.