Kodagu

ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಚೆಟ್ಟಳ್ಳಿ ಪ್ರೌಢಶಾಲೆಯ ಶಿಕ್ಷಕ ಸತ್ಯನಾರಾಯಣ ಆಯ್ಕೆ

admincoorgdaily

ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಚೆಟ್ಟಳ್ಳಿ ಪ್ರೌಢಶಾಲೆಯ ಶಿಕ್ಷಕ ಸತ್ಯನಾರಾಯಣ ಆಯ್ಕೆ
ಮಡಿಕೇರಿ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರ ಘಟಕ ನೀಡುವ ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ
ಚೆಟ್ಟಳ್ಳಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸತ್ಯ ನಾರಾಯಣ ಜಿ.ಸಿ  ಆಯ್ಕೆಯಾಗಿದ್ದಾರೆ ಎಂದು ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ಅವರು ಪ್ರಕಟಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 05-09-2026 ರ ಶನಿವಾರ ಬೆಳಗ್ಗೆ 10.00 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ ಜೋಡೋ ಭವನ"‌ದಲ್ಲಿ ನಡೆಯಲಿದ್ದು, ಸತ್ಯನಾರಾಯಣ ಅವರು ಕುಟುಂಬ ಸಮೇತರಾಗಿ ಆಗಮಿಸಿ ಪ್ರಶಸ್ತಿ ಸ್ವೀಕರಿಸುವಂತೆ ಆಹ್ವಾನ ಪತ್ರದಲ್ಲಿ ತಿಳಿಸಲಾಗಿದೆ.