Kodagu

ಸ್ಕೌಟ್ಸ್ ಮತ್ತು ಗೈಡ್ಸ್ 77ನೇ ಸಂಸ್ಥಾಪನ ದಿನಾಚರಣೆ ಹಾಗೂ ಧ್ವಜ ದಿನಾಚರಣೆ

admincoorgdaily

ಸ್ಕೌಟ್ಸ್ ಮತ್ತು ಗೈಡ್ಸ್ 77ನೇ ಸಂಸ್ಥಾಪನ ದಿನಾಚರಣೆ ಹಾಗೂ ಧ್ವಜ ದಿನಾಚರಣೆ
ಮಡಿಕೇರಿ;ಭಾರತ ಸ್ಕೌಟ್ ಮತ್ತು ಗೈಡ್ಸ್ 77ನೇ ಸಂಸ್ಥಾಪನ ದಿನಾಚರಣೆ ಹಾಗೂ ಧ್ವಜ ದಿನಾಚರಣೆ 
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ 77ನೇ ಸಂಸ್ಥಾಪನ ದಿನಾಚರಣೆ ಹಾಗೂ ಧ್ವಜ ದಿನಾಚರಣೆ ಆಚರಿಸಲಾಯಿತು 
      ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಸಂಸ್ಥೆಯ ಅಧ್ಯಕ್ಷರು ಆಗಿರುವ ಸೋಮಶೇಖರ್ ಎಸ್ ಜೆ ಅವರು ಧ್ವಜ ಚೀಟಿಗಳನ್ನು ಬಿಡುಗಡೆಗೊಳಿಸಿ, ಶುಭ ಕೋರಿದರು.

    ಸಂಸ್ಥಾಪನ ದಿನಾಚರಣೆ ಹಾಗೂ ಧ್ವಜ ದಿನಾಚರಣೆ ಬಗ್ಗೆ ಕೊಡಗು ಜಿಲ್ಲಾ ಸಂಸ್ಥೆಯ ಸ್ಕೌಟ್  ಆಯುಕ್ತರಾದ ಜಿಮ್ಮಿ ಸಿಕ್ವೇರಾ ಅವರು ದಿನದ ಮಹತ್ವದ ಬಗ್ಗೆ ತಿಳಿಸಿದರು.
    ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಗೈಡ್ ಆಯುಕ್ತರು ಆಗಿರುವ ರಾಣಿ ಮಾಚಯ್ಯ, ಬುಲ್ ಬುಲ್ ವಿಭಾಗದ ಮುಖ್ಯಸ್ಥರಾದ 
 ಡೈಸಿ, ಹಾಗೂ ಸಂತ ಮೈಕಲರ  ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಮತ್ತು ಸಂತ ಜೋಸೆಫರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬುಲ್ ಬುಲ್ಸ್ , ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ಸಂಘಟಕರಾದ ಯು ಸಿ ದಮಯಂತಿ ಪಾಲ್ಗೊಂಡಿದ್ದರು.