Kodagu

ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಗೆ ಪಾಲೀಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಆಯ್ಕೆ

admincoorgdaily

ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಗೆ ಪಾಲೀಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಆಯ್ಕೆ
ವಿರಾಜಪೇಟೆ: 2026-27ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ವಿರಾಜಪೇಟೆ ತಾಲೂಕು ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪಾಲೀಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

   ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಾಲೇಜಿನ ವಿದ್ಯಾರ್ಥಿನಿಯರಾದ ರಿಫಾ ಹಾಗೂ ಕೀರ್ತಿಕಾ ಅವರು ಜಯಶೀಲರಾಗುವ ಮೂಲಕ ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶೈನಾ ಕೆ.ಕೆ. ಅವರು ತಿಳಿಸಿದ್ದಾರೆ.