Kodagu

ಸ್ವ-ಉದ್ಯೋಗ ಮಾಹಿತಿ ಕಾರ್ಯಕ್ರಮ; ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

admincoorgdaily

ಸ್ವ-ಉದ್ಯೋಗ ಮಾಹಿತಿ ಕಾರ್ಯಕ್ರಮ; ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ
ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ವಿರಾಜಪೇಟೆ ತಾಲೂಕು ಗೋಣಿಕೊಪ್ಪ ವಲಯದ ವತಿಯಿಂದ ಸಮುದಾಯ ಭವನ ಗೋಣಿಕೊಪ್ಪದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು. 

   ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಹಾಯಕರಾದ ನವ್ಯ ಅವರು ಸ್ವಉದ್ಯೋಗದ ಬಗ್ಗೆ ಮಾತನಾಡಿ ನಿರುದ್ಯೋಗ ಎಂಬುದು ಸಮಸ್ಯೆಯಲ್ಲ, ಉದ್ಯೋಗ ಮಾಡುವವರಿಗೆ ನೂರೆಂಟು ಮಾರ್ಗಗಳಿವೆ. ಫಾಸ್ಟ್ ಫುಡ್ ತಯಾರಿಕೆ, ಮಹಿಳೆಯರಿಗೆ ಟೈಲರಿಂಗ್, ಅಣಬೆ ಕೃಷಿ, ಜೂಟ್ ಬ್ಯಾಗ್ ತಯಾರಿಕೆ, ಪೇಪರ್ ಬ್ಯಾಗ್, ಬಟ್ಟೆ ಬ್ಯಾಗ್ ತಯಾರಿಕೆ, ಅಗರಬತ್ತಿ ತಯಾರಿಕೆ ಇನ್ನೂ ಹಲವು ರೀತಿಯ ಸ್ವಉದ್ಯೋಗ ಮಾಡಲು ದಾರಿಗಳಿವೆ ಎಂದು ಮಾಹಿತಿ ನೀಡಿದರು.

   ಈ ಸಂದರ್ಭದಲ್ಲಿ ಗೋಣಿಕೊಪ್ಪ ಒಕ್ಕೂಟದ ಅಧ್ಯಕ್ಷರಾದ ಮಂಜುಳಾ ಮಾತನಾಡಿ ನಮ್ಮ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಮಾಡಲು ನೂರಾರು ದಾರಿಗಳಿವೆ ಅದನ್ನು ನಾವು ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮಾಭಿವೃದ್ಧಿ ಯೋಜನೆ ತರಬೇತಿಗಳನ್ನು ನೀಡುವುದರಿಂದ ನಮಗೆ ತುಂಬಾ ಉಪಯುಕ್ತವಾಗುತ್ತದೆ ಎಂದು ಮಾಹಿತಿ ನೀಡಿದರು. 
   ಕೃಷಿ ಮೇಲ್ವಿಚಾರಕರಾದ ವಸಂತ್, ಉಪಾಧ್ಯಕ್ಷರಾದ ಪುಷ್ಪ ಮನೋಜ್, ಸೇವಾ ಪ್ರತಿನಿಧಿ ವಿಮಲ, ಸಂಘದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.