ಅ. 31ರಂದು ಪೊನ್ನಂಪೇಟೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಲಯ ಉದ್ಘಾಟನೆ
admincoorgdaily

ಪೊನ್ನಂಪೇಟೆ: ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಪೊನ್ನಂಪೇಟೆ ವಕೀಲರ ಸಂಘದ ವತಿಯಿಂದ ಪೊನ್ನಂಪೇಟೆ ನ್ಯಾಯಾಂಗ ಸಂಕೀರ್ಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭ ಅ. 31ರಂದು ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಜ್ಜಿಕುಟ್ಟೀರ ಎಸ್. ಬೋಪಣ್ಣ ಅವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ. ಶುಕುರ್ ಕಮಲ್ ಅವರ ಉಪಸ್ಥಿತಿಯಲ್ಲಿ ನ್ಯಾಯಾಲಯವನ್ನು ಉದ್ಘಾಟಿಸಲಿದ್ದಾರೆ.
ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕೊಡಗು ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಸ್. ರಾಚಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿಗಳಾದ ಸಿ.ಎಂ. ಪೂಣಚ್ಚ, ಕೆ.ಜಿ. ಶಾಂತಿ, ಕೆ.ಎಸ್. ಭರತ್ ಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ, ವಕೀಲ ಸುರೇಶ್ ಅಯ್ಯಪ್ಪ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಾರುತಿ ಎಸ್. ಬಗಡೆ, ಪೊನ್ನಂಪೇಟೆ ವಕೀಲರ ಸಂಘದ ಅಧ್ಯಕ್ಷ ಮಲ್ಲಂಗಡ ಜಿ. ರಾಕೇಶ್ ಹಾಗೂ ಕಾರ್ಯದರ್ಶಿ ಗಿರೀಶ್ ಅಣ್ಣಯ್ಯ ಭಾಗವಹಿಸಲಿದ್ದಾರೆ.