ಹಿರಿಯ ಕಾಂಗ್ರೆಸ್ ಮುಖಂಡ ರಾಜು ಅಪ್ಪಯ್ಯ ನಿಧನ
admincoorgdaily

ಸಿದ್ದಾಪುರ:
ಮಾಲ್ದಾರೆ ಭಾಗದ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾಗಿದ್ದ ರಾಜು ಅಪ್ಪಯ್ಯ ಅವರು ಶುಕ್ರವಾರ ಬೆಳಿಗ್ಗೆ ನಿಧನರಾದರು.
ಮಾಲ್ದಾರೆ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದ ಇವರು, ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಮಕ್ಕಳು ಹಾಗೂ ಅಪಾರ ಬಂಧು ಬಳಗ ಸ್ನೇಹಿತರನ್ನು ಅಗಲಿದ್ದಾರೆ
ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನದ ನಂತರ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.