CRIME

ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ: ಸೋಮವಾರಪೇಟೆಯಲ್ಲಿ ಓರ್ವನ ಬಂಧನ

admincoorgdaily

ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ: ಸೋಮವಾರಪೇಟೆಯಲ್ಲಿ ಓರ್ವನ ಬಂಧನ
ಸೋಮವಾರಪೇಟೆ: ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಗೆ ಮೊಬೈಲ್ ಆಮಿಷವೊಡ್ಡಿ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿ ರಸ್ತೆಯ ಅಂಗಡಿಯಲ್ಲಿ ಕೆಲಸ ಮಾಡುವ ಆರೋಪಿಯು ಬಾಲಕಿಗೆ ಮೊಬೈಲ್ ಕೊಡಿಸಿ ಪರಿಚಯ ಮಾಡಿಕೊಂಡಿದ್ದ. ಸ್ಪೆಷಲ್ ಕ್ಲಾಸ್ ಮುಗಿಸಿ ಬಂದ ಬಾಲಕಿಯನ್ನು ಕಾರಿನಲ್ಲಿ ರೇಂಜರ್ ಬ್ಲಾಕ್ ನ ತನ್ನ ಮನೆಗೆ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಯಿ ನೀಡಿದ ದೂರಿನ ಆಧಾರದ ಮೇಲೆ ಠಾಣಾಧಿಕಾರಿ ಖತೀಜಾ ಅವರು ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಡಿವೈಎಸ್‌ಪಿ ಚಂದ್ರಶೇಖರ್ ಮತ್ತು ಇನ್ಸ್‌ಪೆಕ್ಟರ್ ಕೃಷ್ಣರಾಜ್ ಮಾರ್ಗದರ್ಶನದಲ್ಲಿ ತನಿಖೆ ಮುಂದುವರಿದಿದೆ.