ಶನಿವಾರಸಂತೆ: ಶ್ರೀ ವೆಂಕಟೇಶ್ವರ ದೇವಸ್ಥಾನದ ಅಭಿವೃದ್ಧಿಗೆ 1 ಲಕ್ಷ ರೂ ಕೊಡುಗೆ
admincoorgdaily

ಶನಿವಾರಸಂತೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ವಲಯದ ಮುದ್ರವಳ್ಳಿ ಗ್ರಾಮದ ಶ್ರೀ ವೆಂಕಟೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾಗಿದ್ದ ರೂ. ಒಂದು ಲಕ್ಷ ಮೊತ್ತದ ಡಿಡಿಯನ್ನು ದೇವಾಲಯ ಸಮಿತಿಯವರಿಗೆ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ್ ಸಾಲಿನ್, ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತ ಅಂಗಡಿ, ದೇವಾಲಯ ಸಮಿತಿ ಅಧ್ಯಕ್ಷ ಭಗವಾನ್ ದಾಸ್, ಕಾರ್ಯದರ್ಶಿ ರಂಗರಾಜ್, ದೇವಾಲಯ ಸಮಿತಿ ಸದಸ್ಯರು, ದುಂಡಳ್ಳಿ ಒಕ್ಕೂಟದ ಅಧ್ಯಕ್ಷೆ ಲೀಲಾವತಿ, ವಲಯದ ಮೇಲ್ವಿಚಾರಕ ಅಚ್ಚುತ, ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.