ಸಿದ್ದಾಪುರ:ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳು ವಶಕ್ಕೆ

ಸಿದ್ದಾಪುರ:ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳು ವಶಕ್ಕೆ

ಸಿದ್ದಾಪುರ :ಭಾರೀ ಸರಕು ವಾಹನಗಳ ಓಡಾಟಕ್ಕೆ ಜಿಲ್ಲೆಯಲ್ಲಿ ನಿಷೇಧ ಇರುವ ಹಿನ್ನೆಲೆಯಲ್ಲಿ ‌ಮರದ ದಿಮ್ಮಿಗಳ‌ನ್ನು ತುಂಬಿದ ಮೂರು ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್ ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಮಾಲು ಸಹಿತ ಮೂರು ವಾಹನಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿದ್ದಾರೆ.