ಸಿದ್ದಾಪುರ:ಇಕ್ರಾ ಶಿಕ್ಷಣ ಸಂಸ್ಥೆಯಲ್ಲಿ ಯೋಗಭ್ಯಾಸ ಶಿಬಿರ: ಸದೃಢ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಗಣ್ಯರ ಕರೆ

Jul 1, 2025 - 16:10
 0  44
ಸಿದ್ದಾಪುರ:ಇಕ್ರಾ ಶಿಕ್ಷಣ ಸಂಸ್ಥೆಯಲ್ಲಿ ಯೋಗಭ್ಯಾಸ ಶಿಬಿರ:  ಸದೃಢ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಗಣ್ಯರ ಕರೆ

ಸಿದ್ದಾಪುರ:- ಇಕ್ರಾ ಪಬ್ಲಿಕ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಯೋಗ ಶಿಬಿರದಲ್ಲಿ ಪಾಲ್ಗೊಂಡು ಯೋಗದ ಮಹತ್ವವನ್ನು ತಿಳಿದುಕೊಂಡರು. ಯೋಗಾ ತರಬೇತುದರಾದ ಶಿಕ್ಷಕಿ  ಎನ್.ಎ ವಿದ್ಯಾ ಮಾತನಾಡಿ ದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಎಲ್ಲಾ ಕಡೆ ಆಚರಿಸಲಾಗುತ್ತಿದ್ದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅತ್ಯವಶ್ಯಕವಾಗಿದೆ.ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯೋಗ ಕಲಿಕಾ ಶಿಬಿರಗಳಲ್ಲಿ ಪಾಲ್ಗೊಂಡು ಯೋಗ್ಯ ಯೋಗಾಭ್ಯಾಸದ ಮಹತ್ವವನ್ನು ತಿಳಿದುಕೊಳ್ಳಬೇಕೆಂದರು.

 ಇಕ್ರಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಕೆ.ಯು ಅಬ್ದುಲ್ ರಜಾಕ್ ಮಾತನಾಡಿ ಮಾನಸಿಕ, ದೈಹಿಕ ಆರೋಗ್ಯದ ಸಮತೋಲನಕ್ಕೆ ಯೋಗ ಅಭ್ಯಾಸವು ಬಹಳ ಸಹಕಾರಿ ಆಗಲಿದೆ ಎಲ್ಲರೂ ಸಹ ತಮ್ಮ ಜೀವನದುದ್ದಕ್ಕೂ ಯೋಗವನ್ನು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

 ಈ ಸಂದರ್ಭ ನೂರಾರು ವಿದ್ಯಾರ್ಥಿಗಳು ಯೋಗಭ್ಯಾಸದಲ್ಲಿ ಪಾಲ್ಗೊಂಡು ತಮ್ಮ ಪ್ರದರ್ಶನ ತೋರಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರುಗಳು, ವಿದ್ಯಾರ್ಥಿಗಳು, ಪಾಲ್ಗೊಂಡಿದ್ದರು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0