ಸಿದ್ದಾಪುರ: ಇಂಜಲಗರೆ ನಿವಾಸಿ ಕೆ.ಜಿ ದಾಸನ್ ಆತ್ಮಹತ್ಯೆ
admincoorgdaily

ಸಿದ್ದಾಪುರ: ಇಂಜಲಗರೆ ನಿವಾಸಿ ಕೆ.ಜಿ ದಾಸನ್ ಎಂಬವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುವಾರ ಮಧ್ಯಾಹ್ನದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.