ಸಿದ್ದಾಪುರ;ಲೈನ್ ಮನೆಯಲ್ಲಿ ಕಾರ್ಮಿಕ ನೇಣುಬಿಗಿದು ಆತ್ಮಹತ್ಯೆ
admincoorgdaily

ಸಿದ್ದಾಪುರ: ಕಾಫಿ ತೋಟದ ಲೈನ್ ಮನೆಯಲ್ಲಿ ಕಾರ್ಮಿಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಹ್ಯ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗುಹ್ಯ ಗ್ರಾಮದ ಕಾಫಿ ತೋಟದೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಕಾಳ (65) ತನ್ನ ಲೈನ್ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರಿಗೆ ಇತ್ತೀಚೆಗೆ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿದ್ದು, ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.