ಸಿದ್ದಾಪುರ; ಯುವಕ ಆತ್ಮಹತ್ಯೆಗೆ ಯತ್ನ
admincoorgdaily

ಸಿದ್ದಾಪುರ: ಕರಡಿಗೋಡು ಗ್ರಾಮದಲ್ಲಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸೋಮವಾರಪೇಟೆ ಮೂಲದ ಗೌತಮ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ತಕ್ಷಣ ಆತನನ್ನು ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಲಾಗಿದೆ.
ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.