ಸಿದ್ದಾಪುರ: ಪ್ರಧಾನಿ ಮೋದಿ ಜನ್ಮದಿನಾಚರಣೆ - ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಣೆ
admincoorgdaily

ಸಿದ್ದಾಪುರ: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನವನ್ನು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ರುಬೇಶ್ ನೇತೃತ್ವದಲ್ಲಿ ಕಾರ್ಯಕರ್ತರು ಆಚರಿಸಿದರು. ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಜನ್ಮದಿನ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ಕೇಂದ್ರದಲ್ಲಿನ ಅವ್ಯವಸ್ಥೆ ಮತ್ತು ಕೊರತೆಗಳನ್ನು ಗಮನಿಸಿದ ಕಾರ್ಯಕರ್ತರು ವೈದ್ಯಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀನಾ ತುಳಸಿ, ಮೋದಿಜಿಯವರು ಕಳೆದ 12 ವರ್ಷದಲ್ಲಿ ಇಡೀ ವಿಶ್ವದ ಗಮನ ಭಾರತದ ಕಡೆ ಸೆಳೆಯುವಂತೆ ಸಾಧನೆ ಮಾಡಿದ್ದಾರೆ. ಅವರಿಗೆ ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸಿದರು.
ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು, ಕೂಡಲೇ ಸ್ತ್ರೀ ರೋಗ ಮತ್ತು ಮಕ್ಕಳ ತಜ್ಞರ ಅಗತ್ಯವಿದೆ. ರಾಜ್ಯ ಸರ್ಕಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚಿನ ವೈದ್ಯರನ್ನು ನೇಮಕ ಮಾಡಬೇಕು. ಎಕ್ಸ್-ರೇ ಸೇರಿದಂತೆ ಯಂತ್ರೋಪಕರಣಗಳು ಹಳೆಯದಾಗಿ ಕೆಟ್ಟು ನಿಂತಿದ್ದು, ಹೊಸ ಯಂತ್ರೋಪಕರಣಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಉದಯ, ಗಣೇಶ್, ಮೋಹನ್, ಮಧುಮಾದಪ್ಪ, ಸೂರಿ, ಪ್ರಜಿತ್ ಹಾಜರಿದ್ದರು.