Kodagu

ಮಲ್ಲಳ್ಳಿ ಜಲಪಾತದಲ್ಲಿ SIR-2026 ಜಾಗೃತಿ ಜಾಥ

admincoorgdaily

ಮಲ್ಲಳ್ಳಿ ಜಲಪಾತದಲ್ಲಿ SIR-2026 ಜಾಗೃತಿ ಜಾಥ
1002470625.jpg


ಸೋಮವಾರಪೇಟೆ:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ದಿನಾಂಕ 20/09/2026 ರಂದು SIR-2026 ರ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾ ಅಧಿಕಾರಿ ಪರಮೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಈ ಜಾಥ ನಡೆಯಿತು.

ಪ್ರವಾಸಿ ತಾಣಕ್ಕೆ ಆಗಮಿಸಿದ ಪ್ರವಾಸಿಗರಿಗೆ SIR ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿ ಸಿಬ್ಬಂದಿ, ಪ್ರವಾಸಿಗರು ಸೇರಿದಂತೆ ಹಲವರು ಹಾಜರಿದ್ದರು.