Kodagu

ದೇವಾಲಯ ಜೀರ್ಣೋದ್ಧಾರಕ್ಕೆ ನೆರವು ನೀಡಿದ ಸಮಾಜ ಸೇವಕ ಎಡಿಕೇರಿ‌ ಪ್ರಸನ್ನ

admincoorgdaily

ದೇವಾಲಯ ಜೀರ್ಣೋದ್ಧಾರಕ್ಕೆ ನೆರವು ನೀಡಿದ ಸಮಾಜ ಸೇವಕ ಎಡಿಕೇರಿ‌ ಪ್ರಸನ್ನ
ಐಗೂರು, ಸೆ.10: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸತೋಟದ ಶ್ರೀ ಚಾಮುಂಡೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಸಮಾಜ ಸೇವಕ ಎಡಿಕೇರಿ ಪ್ರಸನ್ನ ಅವರು ರೂ. 25,000 ಧನಸಹಾಯ ನೀಡಿದರು.

ದೇವಾಲಯದ ಸಮಿತಿಯ ಪದಾಧಿಕಾರಿಗಳನ್ನು ಭೇಟಿ ಮಾಡಿದ ಅವರು ಧನಸಹಾಯವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.