ಸೋಮವಾರಪೇಟೆ: ಡೆಂಗ್ಯೂ ವಿರೋಧ ಮಾಸಾಚರಣೆ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು ಕಾರ್ಯಕ್ರಮ

ಸೋಮವಾರಪೇಟೆ: ಡೆಂಗ್ಯೂ ವಿರೋಧ ಮಾಸಾಚರಣೆ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು ಕಾರ್ಯಕ್ರಮ

ಸೋಮವಾರಪೇಟೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸೋಮವಾರಪೇಟೆಯಲ್ಲಿ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳ CDPO ರವ ರಾದ ಶ್ರೀ ದೇವಿ ಮೇಡಂ ರವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಡೆಂಗ್ಯೂ ವಿರೋಧ ಮಾಸಾಚರಣೆ ಕಾರ್ಯಕ್ರಮವನ್ನು ಆಚರಿಸ ಲಾಯಿತು. ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳ ಕಚೇರಿಯಿಂದ ಜಿಲ್ಲಾ ಎಂಟ ಮಾಲಜಿಸ್ಟ್ ಮಂಜುನಾಥ್ ರವರು ಮಾತನಾಡುತ್ತಾ ಡೆಂಗ್ಯೂ ಹಾಗೂ ಮಲೇರಿಯಾ ಜ್ವರ ಶೀಘ್ರ ವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆ ಯನ್ನು ನೀಡುವುದರ ಮೂಲಕ ಗುಣಪಡಿಸಬಹುದು ಎಂದು ತಿಳಿಸುತ್ತಾ , ಡೆಂಗ್ಯೂ ಜ್ವರ ಹಾಗೂ ಮಲೇರಿಯಾ ಜ್ವರದ ಲಕ್ಷಣಗಳ ಬಗ್ಗೆ ಮತ್ತು ಚಿಕಿತ್ಸೆ ಯ ಬಗ್ಗೆ ಸೊಳ್ಳೆಗಳ ಜೀವನ ಚಕ್ರದ ಬಗ್ಗೆ ಹಾಗೂ ಮಲೇರಿಯ ಜ್ವರದ ಬಗ್ಗೆ, ಚಿಕೂನ್ ಗುನ್ಯಾ ಜ್ವರದ ಬಗ್ಗೆ ತಿಳಿಸಿದರು. ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿಗಳಾದ ವಿಶ್ವಜ್ಞಾ ರವರು ಮಾತನಾಡುತ್ತಾ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ , ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ, ವಿಶ್ವ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮದ ಬಗ್ಗೆ ಹಾಗೂ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ , ಪರಿಸರ ಸ್ವಚ್ಛತೆಯ ಬಗ್ಗೆ ನೀರಿನ ಸ್ವಚ್ಛತೆಯ ಬಗ್ಗೆಆರೋಗ್ಯ ಶಿಕ್ಷಣದ ಕುರಿತು ಮಾಹಿತಿಯನ್ನು ನೀಡಿದರು.ಈ ಕಾರ್ಯಕ್ರಮದಲ್ಲಿ ಸೋಮವಾರ ಪೇಟೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರದ ಸಹಾಯಕಿ ಯವರುಗಳು ಹಾಜರಿದ್ದರು. ಮತ್ತು ಇಲಾಖೆ ಯ ಸಿಬ್ಬಂದಿ ವರ್ಗದವರು ಹಾಜರಿದ್ದರು.