ಸೋಮವಾರಪೇಟೆ:ಮಸಗೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಪ್ರಾರಂಭ

ಕುಶಾಲನಗರ; ಸೋಮವಾರಪೇಟೆ ತಾಲ್ಲೂಕಿನ ಮಸಗೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕಳೆದ ವರ್ಷದಿಂದ ಎಲ್.ಕೆ.ಜಿ ಹಾಗೂ ಪ್ರಸ್ತುತ ವರ್ಷದಿಂದ ಯು.ಕೆ.ಜಿ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ನೂತನ ಕೊಠಡಿಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯನ್ನು ನೇರುಗಳಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಎಲ್.ಕೆ.ಜಿ, ಯುಕೆಜಿ ಸ್ಥಾಪನಾ ಸಮಿತಿಯ ಅಧ್ಯಕ್ಷ ಲೋಕಾನಂದ ಉದ್ಘಾಟನೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಕ್ಕಳಿಗೆ ಶಾಲೆಯಲ್ಲೇ ಎಲ್.ಕೆ.ಜಿ, ಯು.ಕೆ.ಜಿ. ತರಗತಿಗಳನ್ನೊಳಗೊಂಡ ಗುಣಮಟ್ಟದ ಶಿಕ್ಷಣ ದೊರಕಿಸುವ ಹಾಗೂ ಸ್ಪರ್ಧಾತ್ಮಕ ಶಿಕ್ಷಣ ನೀಡುವ ಉದ್ದೇಶದೊಂದಿಗೆ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಹಾಗೂ ದಾನಿಗಳ ಸಹಕಾರದಿಂದ ಬಡಮಕ್ಕಳು ಶಿಕ್ಷ ಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಾಲೆಯಲ್ಲಿ ಎಲ್.ಕೆ.ಜಿ, ಯು.ಕೆ.ಜಿ ಪ್ರಾರಂಭಿಸಲಾಗಿದ್ದು. ಪಾಲಕರೂ ಸೇರಿ ಈ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ಶಾಂತಮ್ಮ ಮಾತನಾಡಿ, ಸರ್ಕಾರಿ ಶಾಲೆಯಲ್ಲಿಯೂ ಉತ್ತಮ ಶಿಕ್ಷಣ ದೊರೆಯುತ್ತದೆ. ಪಾಲಕರು ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸಬೇಕು. ಇಲ್ಲಿ ಈಗಾಗಲೇ ಎಲ್.ಕೆ.ಜಿ, ಯು.ಕೆ.ಜಿ ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಹಾಗೂ ದಾನಿಗಳ ಸಹಕಾರದಿಂದ ಸಾರಿಗೆ ವ್ಯವಸ್ಥೆ ಸೇರಿದಂತೆ ಮಕ್ಕಳಿಗೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿರುವುದಾಗಿ ಹೇಳಿದರು.
ಈ ಸಂದರ್ಭ ನೇರುಗಳಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಲಜಾಕ್ಷಿ ದಿನೇಶ್, ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಪ್ರವೀಣ, ಸದಸ್ಯರಾದ ಅಶ್ವಿನಿ, ಕವಿತಾ, ಎಲ್.ಕೆ.ಜಿ, ಯುಕೆ.ಜಿ. ಸಮಿತಿಯ ಅಧ್ಯಕ್ಷೆ ಹಾಗೂ ನೇರುಗಳಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಉಷಾ ರವಿಂದ್ರ, ಎಸ್.ಡಿ.ಎಂ.ಸಿ. ಅದ್ಯಕ್ಷ ತಿಮ್ಮಪ್ಪ, ಸರ್ವ ಸದಸ್ಯರು,
ಸ್ನೇಹ ಸಮ್ಮಿಲನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಫೀಕ್, ಕಾರ್ಯದರ್ಶಿ ಹರೀಶ್, ಖಜಾಂಚಿ ಶಿವಪ್ಪ, ಶಾಲೆಯ ಸಹ ಶಿಕ್ಷಕರಾದ ನಾಗೇಂದ್ರ, ವಿಮಲ, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.