Kodagu

ಸೋಮವಾರಪೇಟೆ: ಮಹಿಳೆ ಮೇಲೆ ಮಾನಭಂಗಕ್ಕೆ ಯತ್ನ; ಕೂಲಿ ಕಾರ್ಮಿಕನಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ

admincoorgdaily

ಸೋಮವಾರಪೇಟೆ: ಮಹಿಳೆ ಮೇಲೆ ಮಾನಭಂಗಕ್ಕೆ ಯತ್ನ; ಕೂಲಿ ಕಾರ್ಮಿಕನಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ
ಮಡಿಕೇರಿ:ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

 12-06-2025 ರಂದು ಸೋಮವಾರಪೇಟೆ ತಾಲೂಕಿನ ಕಾರೆಕೊಪ್ಪ, ಬೇಳೂರು ಬಸವನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮೂಲತಃ ಅಸ್ಸಾಂ ರಾಜ್ಯದ ಗೋಲ್ಪಾರಾ ಜಿಲ್ಲೆಯ ಕೃಷ್ಣಾಯಿಗುರಿ ಗ್ರಾಮದ ನಿವಾಸಿ ಸೈದುಲ್ಲಾ ಅಲಿಯಾಸ್ ಸೊಯದೂರ್ ಇಸ್ಲಾಂ ಎಂಬಾತ ಮಹಿಳೆಯೋರ್ವರ ಮೇಲೆ ಮಾನಭಂಗಕ್ಕೆ ಯತ್ನಿಸಿದ್ದ.

ಈ ಸಂಬಂಧ ಅಂದಿನ ಸೋಮವಾರಪೇಟೆ ಠಾಣಾಧಿಕಾರಿ ಎಂ.ಎ. ಗೋಪಾಲ ಅವರು ಪ್ರಕರಣ ದಾಖಲಿಸಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಡಿಕೇರಿಯ 1ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಮ್ತಾಜ್ ಅವರು ಆರೋಪಿ ತಪ್ಪಿತಸ್ಥ ಎಂದು ಪರಿಗಣಿಸಿ ಒಂದೂವರೆ ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎನ್.ಪಿ. ದೇವೇಂದ್ರ ಅವರು ವಾದ ಮಂಡಿಸಿದ್ದರು.