Kodagu

ಸೋಮವಾರಪೇಟೆ;ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

admincoorgdaily

ಸೋಮವಾರಪೇಟೆ;ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವುಕುಶಾಲನಗರ, ಅ.11 : ಸೋಮವಾರಪೇಟೆ ತಾಲೂಕಿನ ಕುಂದಳ್ಳಿ ಗ್ರಾಮದಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಕೌಶಿಕ್ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಕಲೇಶಪುರದ ನಿವಾಸಿಯಾದ ಮೃತನು ಅಡಿಗೆ ಕೆಲಸದ ನಿಮಿತ್ತ ಕುಂದಳ್ಳಿಗೆ ಆಗಮಿಸುವ ಸಂದರ್ಭ ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕನನ್ನು ಆರೋಪಿ ಎಂದು ಪರಿಗಣಿಸಿ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.