ಸೋಮವಾರಪೇಟೆ : ಪಟ್ಟಣ ಪಂಚಾಯತಿ ನೂತನ ಮುಖ್ಯಾಧಿಕಾರಿಯಾಗಿ ಎಂ.ಪಿ.ಮಹೇಶ್ ಕುಮಾರ್ ಅಧಿಕಾರ ಸ್ವೀಕಾರ
admincoorgdaily

ಸೋಮವಾರಪೇಟೆ : ಸೋಮವಾರಪೇಟೆ ಪಟ್ಟಣ ಪಂಚಾಯತಿ ನೂತನ ಮುಖ್ಯಾಧಿಕಾರಿಯಾಗಿ ಎಂ.ಪಿ.ಮಹೇಶ್ ಕುಮಾರ್ ಗುರುವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಮುಖ್ಯಾಧಿಕಾರಿಯಾಗಿದ್ದ ಕೃಷ್ಣಪ್ರಸಾದ್ ಅವರು ಕುಶಾಲನಗರ ಪುರಸಭೆಗೆ ಸಿಓ ಆಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಖಾಲಿಯಾದ ಮುಖ್ಯಾಧಿಕಾರಿ ಹುದ್ದೆಗೆ ಮಹೇಶ್‌ಕುಮಾರ್ ಅವರನ್ನು ನಿಯೋಜನೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಮಹಾಂತಪ್ಪ ಎಸ್.ತುರಕನೂರು ಆದೇಶ ಹೊರಡಿಸಿದ್ದಾರೆ.
ಮಹೇಶ್ ಕುಮಾರ್ ಅವರು ಈ ಹಿಂದೆ ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಸಂದರ್ಭ ಕಿರಿಯ ಎಂಜಿನಿಯರ್ ಹೇಮಂತ್ ಕುಮಾರ್, ಕಂದಾಯ ನಿರೀಕ್ಷಕ ಜೀವನ್ ಕುಮಾರ್, ಆರೋಗ್ಯ ನಿರೀಕ್ಷಕ ಜಾಸ್ ಮಿನ್ ಖಾನ್, ಸಮುದಾಯ ಸಂಘಟನಾ ಅಧಿಕಾರಿ ರೂಪ ಐಟಿ ಸಿಬ್ಬಂದಿ ವನಿತಾ, ಲೆಕ್ಕಾಧಿಕಾರಿ ಭವನಾ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.