ವಿರಾಜಪೇಟೆ ಸರ್ಕಾರಿ ಕಾಲೇಜಿನಲ್ಲಿ ಕ್ರೀಡಾ-ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ
admincoorgdaily

ವಿರಾಜಪೇಟೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026-27ನೇ ಸಾಲಿನ ಕ್ರೀಡಾ, ಸಾಂಸ್ಕೃತಿಕ, ಎನ್.ಎಸ್.ಎಸ್., ರೆಡ್‌ಕ್ರಾಸ್, ರೋವರ್ಸ್-ರೇಂಜರ್ಸ್ ಮತ್ತು ವಿವಿಧ ಸಮಿತಿಗಳ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಿತು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರೂ ಆಗಿರುವ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರ ಹಾಗೂ ಇತರ ಸಂಘ-ಸಂಸ್ಥೆಗಳು ಜನರ ಸೇವೆಗಾಗಿ, ಜನರಿಗೆ ಮಾಹಿತಿ ನೀಡಲು ಮತ್ತು ಜನೋಪಯೋಗಿ ಉದ್ದೇಶದಿಂದ 2026-27ನೇ ಸಾಲಿನಲ್ಲಿ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳ ಯಶಸ್ಸಿಗೆ ಆಯಾ ಸಂಸ್ಥೆಗಳ ಪ್ರಮುಖರು ಹಾಗೂ ಪದಾಧಿಕಾರಿಗಳು ಗಮನಹರಿಸಿ ಯಶಸ್ವಿಗೊಳಿಸಬೇಕು. ಇಂತಹ ಕಾರ್ಯಕ್ರಮಗಳಿಂದ ಜನರಿಗೆ ಅನುಕೂಲವಾಗಲಿದ್ದು, ಪ್ರತಿಯೊಂದು ಕೆಲಸವನ್ನು ಜನಸೇವೆ ಎಂದೇ ಭಾವಿಸಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಮಾದಂಡ ತಿಮ್ಮಯ್ಯ, ಸದಸ್ಯರಾದ ನಸೀರ್, ಕೆಡಿಪಿ ಸದಸ್ಯ ಶಶಿ, ಬ್ಲಾಕ್ ಉಪಾಧ್ಯಕ್ಷ ಜೋಕಿಮ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಪ್ರಮುಖರಾದ ಕೋಡಿರ ವಿನೋದ್ ನಾಣಯ್ಯ, ಎಡಪಾಲ ಶಾಫಿ, ಕುಂಡಚ್ಚಿರ ಮಂಜು ದೇವಯ್ಯ, ರಾಜೇಶ್ ನಾಯರ್, ಪ್ರಾಂಶುಪಾಲರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.