ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ; ನಾಪೋಕ್ಲು ಕೆಪಿಎಸ್ ಶಾಲೆಯ ಸಂಲತ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
admincoorgdaily

ನಾಪೋಕ್ಲು :ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ ಹಾಗೂ ಸಂತ ಮೈಕಲರ ಪದವಿ ಪೂರ್ವ ಕಾಲೇಜು ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪದವಿಪೂರ್ವ ಕಾಲೇಜು ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಎ.ಸಂಲತ್ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಮೇಲುಸ್ತುವಾರಿ ಸಮಿತಿ ಹಾಗೂ ಉಪನ್ಯಾಸಕವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ :ಝಕರಿಯ ನಾಪೋಕ್ಲು