Kodagu

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಾಲಿಬೆಟ್ಟದ ವಿದ್ಯಾರ್ಥಿಗಳ ಸಾಧನೆ;ರಾಜ್ಯಮಟ್ಟಕ್ಕೆ ಆಯ್ಕೆ

admincoorgdaily

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಾಲಿಬೆಟ್ಟದ ವಿದ್ಯಾರ್ಥಿಗಳ ಸಾಧನೆ;ರಾಜ್ಯಮಟ್ಟಕ್ಕೆ ಆಯ್ಕೆ
ಸಿದ್ದಾಪುರ :-
ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಾಲಿಬೆಟ್ಟದ ಲೂರ್ಡ್ಸ್ ಹಿಲ್ ಕಾನ್ವೆಂಟ್ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ರೋಹನ್ ಎನ್.ಆರ್. ಅವರು 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ ಈ ಮೂಲಕ ಅವರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇದೇ ಶಾಲೆಯ ಮತ್ತೊಬ್ಬ ವಿದ್ಯಾರ್ಥಿನಿ ರಿಚೆಲ್ ವಾಜ್ ಅವರು ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಯಶಸ್ಸು ಗಳಿಸಲಿ ಎಂದು ಶುಭ ಹಾರೈಸಿದ್ದಾರೆ.