Kodagu

ಕರಾಟೆಯಲ್ಲಿ ಹುದಿಕೇರಿ ಲಿಟಲ್ ಫ್ಲವರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

admincoorgdaily

ಕರಾಟೆಯಲ್ಲಿ ಹುದಿಕೇರಿ ಲಿಟಲ್ ಫ್ಲವರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಪೊನ್ನಂಪೇಟೆ, 26: ಇತ್ತೀಚೆಗೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನೂರಿನಲ್ಲಿ ನಡೆದ ಅಂತರರಾಜ್ಯ ಮಟ್ಟದ ಶೋಟಕಾನ್ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಹಾಗೂ ಟ್ರೋಫಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಹುದಿಕೇರಿಯ ಲಿಟಲ್ ಫ್ಲವರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಸಮರ್ಥ್ ಕುಮಿತೆ ವಿಭಾಗದಲ್ಲಿ ದ್ವಿತೀಯ ಹಾಗೂ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ವಿಷ್ಣುನಾಥ್ ಕುಮಿತೆಯಲ್ಲಿ ಪ್ರಥಮ ಸ್ಥಾನ ಗಳಿಸಿದರೆ, ಕುಶಾಲಪ್ಪ ಕುಮಿತೆ ಮತ್ತು ಕಟಾ ವಿಭಾಗಗಳಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ವ್ಯವಸ್ಥಾಪಕಿ ಹಾಗೂ ಮುಖ್ಯ ಶಿಕ್ಷಕಿ ಜ್ಯೋತಿ ಸತೀಶ್ ಮತ್ತು ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿಗಳಿಗೆ ಪೊನ್ನಂಪೇಟೆ ಶೋಟಕಾನ್ ಕರಾಟೆ ಶಾಲೆಯ ಶಿಕ್ಷಕ ಬಿ.ಎಸ್. ಸಂತೋಷ್ ಕುಮಾರ್ ತರಬೇತಿ ನೀಡಿದ್ದರು.