Kodagu

ಗಾಂಧಿ ಜಯಂತಿ ಪ್ರಯುಕ್ತ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

admincoorgdaily

ಗಾಂಧಿ ಜಯಂತಿ ಪ್ರಯುಕ್ತ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ
ವರದಿ :ಝಕರಿಯ ನಾಪೋಕ್ಲು 

ನಾಪೋಕ್ಲು : ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಅಂಗವಾಗಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಸ್ವಚ್ಛತಾಶ್ರಮದಾನ ನಡೆಸಿದರು.

 ಶಾಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮೊದಲಿಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಭಕ್ತಿ ಪೂರ್ವಕವಾಗಿ ಸ್ಮರಿಸಲಾಯಿತು.

ಬಳಿಕ ಶಾಲೆಯ ಆವರಣ ಹಾಗೂ ಹೊರಾಂಗಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದ ವಿದ್ಯಾರ್ಥಿಗಳು ಪ್ಲಾಸ್ಟಿಕ್,ಇನ್ನಿತರ ತ್ಯಾಜ್ಯಗಳನ್ನು ಸಂಗ್ರಹಿಸಿ ಶುಚಿಗೊಳಿಸಿದರು.

ಈ ಸಂದರ್ಭ ಶಾಲೆಯ ಶಿಕ್ಷಕರಾದ ಕಿರಣ್, ಶಿಕ್ಷಕಿಯರಾದ ತಂಗಮ್ಮ,ನಿಹಾ, ಶಾಲೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.