ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ: ಶಾಂತಿ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಶಾಂತಿ ಅಜ್ಜಿಯ ಕಿವಿಮಾತು
admincoorgdaily

ಸಿದ್ದಾಪುರ:-
ನಿರಂತರ ಪರಿಶ್ರಮ, ಶ್ರದ್ಧೆ ಹಾಗೂ ಸಮಯಪ್ರಜ್ಞೆಯಿಂದ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಹಿರಿಯರಾದ ಶಾಂತಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪಾಲಿಬೆಟ್ಟದ ಲೂರ್ಡ್ಸ್ ಹಿಲ್ ಕಾನ್ವೆಂಟ್ ಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಶಾಲಾ ಆಡಳಿತ ಮಂಡಳಿ ವತಿಯಿಂದ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕಿ ತೆರೇಸಾ ಅವರು, ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದ ಘಟ್ಟವಾಗಿದ್ದು, ಈ ಅವಧಿಯಲ್ಲಿ ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಅಜ್ಜ-ಅಜ್ಜಿಯರ ಅನುಭವದ ಮಾತುಗಳು ಹಾಗೂ ಮಾರ್ಗದರ್ಶನವನ್ನು ಗೌರವಿಸಿ ಪಾಲಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮೊಮ್ಮಕ್ಕಳ ಸಮ್ಮುಖದಲ್ಲಿ ಹಿರಿಯ ನಾಗರಿಕರಿಗೆ ಶಾಲು ಹೊದಿಸಿ ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಶಾಂತಿ ಅವರು, ಮಕ್ಕಳು ಪಠ್ಯ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ನಿರಂತರ ಪರಿಶ್ರಮದಿಂದ ಗುರಿ ಸಾಧಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಮನರಂಜನಾ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಹಿರಿಯರು ಉತ್ಸಾಹದಿಂದ ಭಾಗವಹಿಸಿ ಮಕ್ಕಳನ್ನು ರಂಜಿಸಿದರು.
ಈ ಸಂದರ್ಭ ಹಿರಿಯ ಶಿಕ್ಷಕಿಯರಾದ ಸಮೀತಾ, ಅನಿತಾ, ವಿಲ್ಮ, ಪ್ರೀತು, ಲಿಜಿಯಾ ಹಾಗೂ ಹಿರಿಯರಾದ ಅನ್ನಮ್ಮ, ಪದ್ಮ ಮತ್ತಿತರರು ಉಪಸ್ಥಿತರಿದ್ದರು.