Kodagu

ಸುಂದರನಗರ: ವೃದ್ಧರೋರ್ವರ ಮೇಲೆ ಬೀದಿನಾಯಿಗಳಿಂದ ದಾಳಿ, ಕ್ರಮಕ್ಕೆ ಆಗ್ರಹ

admincoorgdaily

ಸುಂದರನಗರ: ವೃದ್ಧರೋರ್ವರ ಮೇಲೆ ಬೀದಿನಾಯಿಗಳಿಂದ ದಾಳಿ, ಕ್ರಮಕ್ಕೆ ಆಗ್ರಹ
ಕುಶಾಲನಗರ,ಸೆ೨೫: ಕೂಡುಮಂಗಳೂರು ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಸುಂದರನಗರ ವಾರ್ಡ್ ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ವೃದ್ಧರೋರ್ವರ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ನಡೆಸಿದೆ. ಕೂಡಲೇ ಈ ಬಗ್ಗೆ ಗ್ರಾಮ ಪಂಚಾಯಿತಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆಯ ಹಾದಿಯಿಡಿಯಬೇಕಾಗುತ್ತದೆ  ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್ ಎಚ್ಚರಿಸಿದ್ದಾರೆ. 

ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸುಂದರನಗರ ನಿವಾಸಿ ಗಂಗಾಧರ್ ಎಂಬವರು ರಸ್ತೆಯಲ್ಲಿ ಸಂಚರಿಸುವ ವೇಳೆ ಬೀದಿ ನಾಯಿಗಳ ಗುಂಪು ದಾಳಿ ಮಾಡಿವೆ. ಇದರ ಪರಿಣಾಮ ಅವರು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾರ್ವಜನಿಕರು ರಸ್ತೆಯಲ್ಲಿ ತಿರುಗಾಡದಂತಾಗಿದೆ ಎಂದರು. 

ಇನ್ನು ಮಕ್ಕಳು ಶಾಲೆಗೆ ತೆರಳುವಾಗ ಬೀದಿ ನಾಯಿಗಳ ದಾಳಿ  ಮಾಡಿ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನಿಸಿದ ಅವರು, ಅನಾಹುತ ಸಂಭವಿಸುವವರೆಗೆ ಕಾಯದೇ ಕೂಡಲೇ ಬೀದಿ ನಾಯಿಗಳ ಹಾವಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. 
ಇಲ್ಲದಿದ್ದಲ್ಲಿ ಗ್ರಾಮಸ್ಥರೊಡನೆ ಸೇರಿ ಪಂಚಾಯಿತಿ ಮುಂಭಾಗ ಹೋರಾಟ ನಡೆಸಬೇಕಾಗುತ್ತದೆ ಎಂದು ಗ್ರಾ.ಪಂ ಮಾಜಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಎಚ್ಚರಿಸಿದ್ದಾರೆ.