ಸೆ. 27ರಂದು ಮಡಿಕೇರಿಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಸ್ವಚ್ಛ-ಕೊಡಗು ಸುಂದರ- ಕೊಡಗು ಅಭಿಯಾನ
admincoorgdaily

ಮಡಿಕೇರಿ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಸೆ.27 ರಂದು ಬೆಳಗ್ಗೆ 7 ಗಂಟೆಗೆ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಜರ ಸಮಾಧಿ, ರಾಜಾ ಸೀಟ್, ಮಡಿಕೇರಿ ಕೋಟೆ ಮತ್ತು ಓಂಕಾರೇಶ್ವರ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಯಲಿದೆ.
ಸುಂದರ ಕೊಡಗನ್ನು ಸ್ವಚ್ಛವಾಗಿ, ಹಸಿರಾಗಿ ಉಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರವಾಸೋದ್ಯಮ ಇಲಾಖೆ ಮನವಿ ಮಾಡಿದೆ.