ಗುಡ್ಡೆಹೊಸೂರಿನಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನ: ರಾಜ್ಯ ಹೆದ್ದಾರಿಯಲ್ಲಿ ಶ್ರಮದಾನ
admincoorgdaily

ಕುಶಾಲನಗರ:ಸ್ವಚ್ಛತಾ ಹೀ ಸೇವಾ’ ಅಭಿಯಾನದ ಅಂಗವಾಗಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಹಾಗೂ ಟಿಜಿಐ ರೆಡಾಲೆಂಟ್ ಪಾಯಿಂಟ್ ರೆಸಾರ್ಟ್ ಸಮೂಹದ ಸಹಯೋಗದೊಂದಿಗೆ ಬೃಹತ್ ಶ್ರಮದಾನ ಮತ್ತು ನೈರ್ಮಲ್ಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜರುಗಿಸಲಾಯಿತು.
ಗುಡ್ಡೆಹೊಸೂರು ಮುಖ್ಯ ವೃತ್ತದಿಂದ ಆರಂಭಗೊಂಡು ಬಾಳಗೋಡುವರೆಗಿನ ರಾಜ್ಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಇತರ ತ್ಯಾಜ್ಯ ಹಾಗೂ ಒಣ ಕಸವನ್ನು ಸಿಬ್ಬಂದಿ ಹಾಗೂ ಸಾರ್ವಜನಿಕರು ಶ್ರಮದಾನದ ಮೂಲಕ ತೆರವುಗೊಳಿಸಿ ಸ್ವಚ್ಛಗೊಳಿಸಿದರು.
ಈ ಜಂಟಿ ಅಭಿಯಾನದಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಹಾಗೂ ಟಿಜಿಐ ರೆಡ್‌ಲ್ಯಾಂಡ್ ಪಾಯಿಂಟ್ ರೆಸಾರ್ಟ್‌ನ ಸಿಬ್ಬಂದಿ ವರ್ಗ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು, ಸಾರ್ವಜನಿಕ ಪ್ರದೇಶಗಳ ನೈರ್ಮಲ್ಯ ಕಾಪಾಡುವಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದರು. ಗ್ರಾಮ ಪಂಚಾಯಿತಿ ಮತ್ತು ಖಾಸಗಿ ಸಂಸ್ಥೆಗಳು ಒಂದಾಗಿ ಪರಿಸರ ರಕ್ಷಣೆಗೆ ಮುಂದಾಗಿರುವುದು ಶ್ಲಾಘನೀಯ ಸಂಗತಿಯಾಗಿದೆ.