ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಕಡಂಗ: ಶ್ರೀ ಬಿ.ಸಿ ರಂಗಪ್ಪ ವಿದ್ಯಾನಿಧಿ ಟ್ರಸ್ಟ್ (ರಿ), ಶ್ರೀ ಯತಿರಾಜದಾಸರ್ ಗುರುಪೀಠ ಮೇಲುಕೋಟೆ ಮತ್ತು ಕೊಡಗು ಕಣಿಯರ ವಿದ್ಯಾಭಿವೃದ್ಧಿ ಸಂಘ (ರಿ ) ವತಿಯಿಂದ ವಾರ್ಷಿಕವಾಗಿ ಕರ್ನಾಟಕ ರಾಜ್ಯ ಕಣಿಯರ ಜನಾಂಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಜನಾಂಗದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಹೆಗ್ಗಡ ಸಮಾಜದಲ್ಲಿ ಜುಲೈ 13 ಭಾನುವಾರದಂದು ನಡಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಶ್ರೀನಿವಾಸ ನರಸಿಂಹ ಗುರೂಜಿ, ಮೈಸೂರು ಕೊಡಗು ಸಂಸದರಾದ ಶ್ರೀ ಯದುವೀರ ಒಡೆಯರ್, ವಿರಾಜಪೇಟೆ ವಿಧಾನಸಭಾ ಶಾಸಕರಾದ ಎ.ಎಸ್ ಪೊನ್ನಣ್ಣ, ಇತಿಹಾಸ ತಜ್ಞರಾದ ಡಾ. ಸೆಲ್ವಪಿಳ್ಳೆ ಅಯ್ಯಂಗಾರ್ ಭಾಗವಹಿಸಲಿದ್ದಾರೆ.

 ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನೃತ್ಯ ದಂಪತಿಗಳಾದ ನೃತ್ಯ ವಿದ್ವಾನ್ ಶ್ರೀ ಯೋಗೇಶ್ ಕುಮಾರ್ ಎಸ್ ಮತ್ತು ಶ್ರೀಮತಿ ಸ್ನೇಹ ನಾರಾಯಣ್ ರವರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮವು ಏರ್ಪಡಿಸಲಾಗಿದೆ.ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನಾಂಗದ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಕಾರ್ಯಕ್ರಮದ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.