Sports News

ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟ

admincoorgdaily

ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟ
ಮಡಿಕೇರ:-ಪ್ರಸಕ್ತ ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯು ಸೆಪ್ಟೆಂಬರ್, 16 ರಿಂದ 24 ರವರೆಗೆ ಇಲಾಖಾ ವತಿಯಿಂದ ನಡೆಯಲಿದೆ.  
    ಮಡಿಕೇರಿ ತಾಲ್ಲೂಕಿಗೆ ಸೆಪ್ಟೆಂಬರ್, 16 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಕುಶಾಲನಗರ ತಾಲ್ಲೂಕಿಗೆ ಸೆಪ್ಟೆಂಬರ್, 17 ರಂದು ಕೂಡಿಗೆಯ ಸೈನಿಕ ಶಾಲೆ ಹಾಗೂ ಕ್ರೀಡಾ ಶಾಲೆ ಮೈದಾನದಲ್ಲಿ, ಸೋಮವಾರಪೇಟೆ ತಾಲ್ಲೂಕಿಗೆ ಸೆಪ್ಟೆಂಬರ್, 18 ರಂದು ಕೂಡಿಗೆಯ ಕ್ರೀಡಾ ಶಾಲೆಯ ಮೈದಾನ ಮತ್ತು ಸೈನಿಕ ಶಾಲೆಯಲ್ಲಿ ಸೆಪ್ಟೆಂಬರ್, 19 ರಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ(ಫುಟ್‍ಬಾಲ್) ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ, ವಿರಾಜಪೇಟೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್, 20 ರಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ (ಫುಟ್‍ಬಾಲ್) ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ. 
     ಸೆಪ್ಟೆಂಬರ್, 24 ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನದಲ್ಲಿ ಹಾಗೂ ಕೂಡಿಗೆ ಸೈನಿಕ ಶಾಲೆ ಮತ್ತು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಆಯಾಯ ತಾಲ್ಲೂಕಿನ ಕ್ರೀಡಾಪಟುಗಳು ಭಾಗವಹಿಸಬಹುದು. 
     ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಹಾಕಿಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕು ಮಟ್ಟದ ದಸರಾ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಕೋರಿದೆ. 
    ಹೆಚ್ಚಿನ ಮಾಹಿತಿಗೆ ಮಡಿಕೇರಿ ತಾಲ್ಲೂಕು ಮಹಾಬಲ 9980887499. ಮನು 9480032712, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು  ವೆಂಕಟೇಶ್ 9844326007, ಸುರೇಶ್ 8892272972, ಪ್ರದೀಪ್ 9342563014, ಪೊನ್ನಂಪೇಟೆ ಮತ್ತು ವಿರಾಜಪೇಟೆ  ಸುಬ್ಬಯ್ಯ 8197790350, ಗಣಪತಿ 8951287301 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ. 
        ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆನ್‍ಲೈನ್ ನೋಂದಣಿ ಕಡ್ಡಾಯ ಪೋರ್ಟಲ್ (dasaracmcup.in) ಆಯಾಯ ತಾಲ್ಲೂಕಿನ ಕ್ರೀಡಾ ಪಟುಗಳು ತಮ್ಮ ತಾಲ್ಲೂಕಿನ ಕ್ರೀಡಾ ಕೂಟದಲ್ಲಿ ಮಾತ್ರ ಭಾಗವಹಿಸಬಹುದು. ಒಂದು ತಾಲ್ಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಮತ್ತೊಂದು ತಾಲ್ಲೂಕಿನಲ್ಲಿ ಭಾಗವಹಿಸಲು ಅವಕಾಶ ಇಲ್ಲ. ಹಾಗೆ ಕಂಡುಬಂದಲ್ಲಿ ಅಂತಹ ಕ್ರೀಡಾಪಟುಗಳನ್ನು ಅನರ್ಹಗೊಳಿಸಲಾಗುತ್ತದೆ. ಆಧಾರ್ ಕಾರ್ಡ್ ಪ್ರತಿ ಕಡ್ಡಾಯವಾಗಿ ತರಬೇಕು. ಆಯಾಯ ದಿನದಂದು ಬೆಳಗ್ಗೆ 9.30 ರ ಒಳಗೆ ಕಡ್ಡಾಯವಾಗಿ ಸ್ಥಳದಲ್ಲಿ ನೋಂದಾಯಿಸಿಕೊಳ್ಳಬೇಕು, ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.