Kodagu

ತಾಲೂಕು ಮಟ್ಟದ ಹಾಕಿ ಪಂದ್ಯಾವಳಿ;ಕಕ್ಕಬೆ ಪ್ರೌಢಶಾಲೆಯ ಬಾಲಕ- ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

admincoorgdaily

ತಾಲೂಕು ಮಟ್ಟದ ಹಾಕಿ ಪಂದ್ಯಾವಳಿ;ಕಕ್ಕಬೆ ಪ್ರೌಢಶಾಲೆಯ ಬಾಲಕ- ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ವರದಿ :ಝಕರಿಯ ನಾಪೋಕ್ಲು 

ನಾಪೋಕ್ಲು : ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬೆ ಪ್ರೌಢಶಾಲೆಯ ಬಾಲಕ- ಬಾಲಕಿಯರ ತಂಡ  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 ಮಡಿಕೇರಿಯ ಟರ್ಫ್ ಹಾಕಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬೆ ಪ್ರೌಢಶಾಲೆಯ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
 ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ಡಿ. ಅನಿಲ್ ರಾಜ್, ವ್ಯವಸ್ಥಾಪಕರಾದ ಕೆ.ಎಂ. ಶರತ್, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ತರಬೇತುದಾರರಾದ ಕೆ.ಡಿ. ಬೋಪಣ್ಣ ಹಾಗೂ ಶಾಲೆಯ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.