Kodagu

ಡಿ. 5 ರಂದು ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ

admincoorgdaily

ಡಿ. 5 ರಂದು ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ
ಮಡಿಕೇರಿ: ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ ಸಮಿತಿ ವತಿಯಿಂದ ಡಿ. 5 ರಂದು ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ ಎಂದು ಅಧ್ಯಕ್ಷ ಹೆಚ್.ಎಂ. ಜಯರಾಮ್ ತಿಳಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಆಯೋಜಿಸಿರುವ ಸ್ಪರ್ಧೆಯಲ್ಲಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿಭಾಗಗಳಿರಲಿವೆ. ಪ್ರತಿ ಶಾಲೆ-ಕಾಲೇಜಿನಿಂದ ಇಬ್ಬರ ತಂಡ ಭಾಗವಹಿಸಬಹುದು. ಅಂಬೇಡ್ಕರ್ ಜೀವನ-ಸಾಧನೆ, ಸಂವಿಧಾನ ಹಾಗೂ ಸಾಮಾನ್ಯ ಜ್ಞಾನ ವಿಷಯಗಳ ಕುರಿತು ಪ್ರಶ್ನೆಗಳಿರಲಿವೆ.ಪ್ರಥಮ ಬಹುಮಾನ ರೂ. 10 ಸಾವಿರ, ದ್ವಿತೀಯ ರೂ. 5 ಸಾವಿರ, ತೃತೀಯ ರೂ. 2,500 ನಗದು ಜೊತೆಗೆ ಬೆಳ್ಳಿ ಪದಕ ನೀಡಲಾಗುವುದು. ಎಲ್ಲ ಸ್ಪರ್ಧಿಗಳಿಗೆ ಪ್ರಶಂಸನಾ ಪತ್ರ ಹಾಗೂ ನೆನಪಿನ ಕಾಣಿಕೆ ಇರಲಿದೆ ಎಂದು ಅಧ್ಯಕ್ಷ ಹೆಚ್.ಎಂ.ಜಯರಾಮ್ ತಿಳಿಸಿದರು.

ಬೆಳಿಗ್ಗೆ 10 ಗಂಟೆಗೆ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದು, ಮಧ್ಯಾಹ್ನ 3.30ಕ್ಕೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಹಾಗೂ ಎಸ್ಪಿ ಬಿಂದುಮಣಿ ಬಹುಮಾನ ವಿತರಿಸಲಿದ್ದಾರೆ. ನೋಂದಣಿಗೆ ಡಿ. 4 ಕೊನೆಯ ದಿನ. ಮಾಹಿತಿಗೆ: 9480425533, 8431536492.ಸಂಪರ್ಕಿಸಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ಹೆಚ್.ಎನ್. ಯೋಗೇಶ್ ಕುಮಾರ್, ಮಾಜಿ ಅಧ್ಯಕ್ಷ ಹೆಚ್.ಆರ್. ಮುತ್ತಪ್ಪ, ಮಾಜಿ ಕಾರ್ಯದರ್ಶಿ ಹೆಚ್.ಟಿ. ವೆಂಕಪ್ಪ, ಕಾರ್ಯಕ್ರಮ ಸಂಚಾಲಕ ಹೆಚ್.ಬಿ. ಪ್ರಶಾಂತ್ ಹಾಗೂ ಸದಸ್ಯ ಎಂ.ಪಿ. ಜಯಪ್ರಕಾಶ್ ಉಪಸ್ಥಿತರಿದ್ದರು.