ಹೊದವಾಡ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ
admincoorgdaily

ನಾಪೋಕ್ಲು :ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಟೂರ್ನಿಯನ್ನು ಇಲ್ಲಿಗೆ ಸಮೀಪದ ಹೊದವಾಡ ಗ್ರಾಮದ ಆರ್.ಎಂ.ಎಸ್ಎ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೊದವಾಡ ಜಮಾಅತ್ ಅಧ್ಯಕ್ಷ ಅಹಮದ್ ಪಿ.ಯು, ,ಪ್ರಧಾನ ಕಾರ್ಯದರ್ಶಿ ಅಶ್ರಫ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರ ,ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಶಾಲಪ್ಪ ,ಎಸ್ ಡಿ ಎಂ ಸಿ ಅಧ್ಯಕ್ಷರು,ಸದಸ್ಯರು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕವೃಂದ ಪಾಲ್ಗೊಂಡಿದ್ದರು.
14 ವರ್ಷ ವಯೋಮಿತಿ ಒಳಗಿನ ಹಾಗೂ 17 ವರ್ಷ ವಯೋಮಿತಿ ಒಳಗಿನ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಟೂರ್ನಿಯನ್ನು ನಡೆಸಲಾಯಿತು. 14 ವರ್ಷ ವಯೋಮಿತಿಯ ಒಳಗಿನ ಬಾಲಕಿಯರ ವಿಭಾಗದಲ್ಲಿ ಸಂಪಾಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದರೆ,ನಾಪೋಕ್ಲುವಿನ ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು. ಬಾಲಕರ ವಿಭಾಗದಲ್ಲಿ ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದರೆ ಮೂರ್ನಾಡು ಪಿಎಂಶ್ರೀ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು.
17 ವರ್ಷ ವಯೋಮಿತಿ ಒಳಗಿನ ಬಾಲಕಿಯರ ವಿಭಾಗದಲ್ಲಿ ಮೂರ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದರೆ, ಸಂಪಾಜೆ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು. ಬಾಲಕರ ವಿಭಾಗದಲ್ಲಿ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದರೆ, ಸಿದ್ದಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು.