Kodagu

ನ.20ರಂದು ಶಿಕ್ಷಕ ಪ್ರಶಸ್ತಿ ಪ್ರದಾನ

admincoorgdaily

ನ.20ರಂದು ಶಿಕ್ಷಕ ಪ್ರಶಸ್ತಿ ಪ್ರದಾನ
ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವ ಶಿಕ್ಷಕ ಪ್ರಶಸ್ತಿ-೨೦೨೬ ಪ್ರದಾನ ಕಾರ್ಯಕ್ರಮ ನ.೨೦ರ ಗುರುವಾರ ಬೆಳಗ್ಗೆ ೧೧ ಗಂಟೆಗೆ ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ.

ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಾಲೆಗಳ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಶವ ಕಾಮತ್ ವಹಿಸಲಿದ್ದು, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಉದ್ಘಾಟಿಸಲಿದ್ದಾರೆ. ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಆಶಯ ನುಡಿ ಆಡಲಿದ್ದು, ಹಿರಿಯ ಸಾಹಿತಿ ಸುಬ್ರಾಯ ಸಂಪಾಜೆ ಗುರುತ್ವದ ಹಿರಿಮೆ ಕುರಿತು ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಸ್.ಪಿ.ಬಿಂದುಮಣಿ, ಡಿಡಿಪಿಐ ಯೋಗೇಶ್, ಪಿಯು ಉಪ ನಿರ್ದೇಶಕ ಗಣಪತಿಯ್ಯ, ಎಚ್.ಎಸ್.ಚೇತನ್, ಕೆ.ಎಸ್.ಪ್ರಸನ್ನ, ಎಚ್.ಜಿ.ಕುಮಾರ್, ನಾಗಪ್ಪ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಪರಿಷತ್ತಿನ ಗೌ.ಕಾ.ರೇವತಿ ರಮೇಶ್, ಪ್ರಮುಖರಾದ ಕೆ.ತುಳಸಿ ಮೋಹನ್, ಲಕ್ಸು ಸೋಮಣ್ಣ, ಪ್ರೇಮ್‌ಕುಮಾರ್ ಉಪಸ್ಥಿತರಿದ್ದರು.