ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: ಶಿಕ್ಷಕರಿಗೆ ಸನ್ಮಾನ ಗೌರವ

ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಶಾಲೆಯ ವಿದ್ಯಾರ್ಥಿಗಳೇ ಅದ್ದೂರಿಯಾಗಿ ನಡೆಸಿ ಕೊಟ್ಟರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ನಡೆಸಿ ಶಾಲೆಗೆ ಶೇಕಡ 100 ರಷ್ಟು ಫಲಿತಾಂಶ ಪಡೆಯಲು ಕಾರಣಕರ್ತ ಶಿಕ್ಷಕರಾದ ಬಿ. ಆರ್. ಮೈನಾ ಕುಮಾರಿ, ಪಿ.ಬಿ. ಸುನಿಲ್ ಕುಮಾರ್, ಎ. ಟಿ. ದಿವ್ಯ,ಎ.ಎಸ್. ವಸಂತ ಲಕ್ಷ್ಮಿ, ಕೆ.ಎನ್.ದಿವಿನ್,ಬಿ.ಸಿ.ಶ್ರುತಿ ಅವರನ್ನು ಶಾಲಾ ಆಡಳಿತ ಮಂಡಳಿವತಿಯಿಂದ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.ಅದರಂತೆ ಶಾಲೆಯ ಎಲ್ಲಾ ಶಿಕ್ಷಕವೃಂದ ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಟಿ.ಬಿ.ಕಿರಣ್, ಸುನಿಲ್ ಕುಮಾರ್ ದಿನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಕಾರ್ಯಕ್ರಮ ಆಯೋಜಿತ ಶಿಕ್ಷಕರಾದ ಆರ್ಶಿತ, ತಂಗಮ್ಮ,ನಿಹಾ ಹಾಜರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿಗಳಾದ ಆಫೀಫ ಹಾಗೂ ಮುರ್ಷಿದ ನಿರೂಪಿಸಿದರು.ಅಜ್ಮಿಯಾ ಸ್ವಾಗತಿಸಿ,ವಿದಾ ಸರ್ವರನ್ನು ವಂದಿಸಿದರು.